ಬೆಂಗಳೂರು, ಆ 13 (DaijiworldNews/HR): ಶೀಘ್ರವೇ ದೇಶದಲ್ಲಿ 5 ಜಿ ಸೇವೆ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
'ವಿಶ್ವಗುರು ಭಾರತ' 100ನೇ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇದು ಉತ್ತಮ ಕಾರ್ಯ. ಕರ್ನಾಟಕ ಬಿಜೆಪಿ ಆರ್ಥಿಕ ಪ್ರಕೋಷ್ಠದ ಈ ಸಾಧನೆ ಶ್ಲಾಘನಾರ್ಹ ಎಂದರು.
ಇನ್ನು 2014ರಿಂದ ಇಂದಿನ ನಡುವಿನ ಅವಧಿಯಲ್ಲಿ ಕೇಂದ್ರ ಸರಕಾರದ ಸಾಧನೆಗಳನ್ನು ವಿವರಿಸಿದ ಅವರು, ಹಿಂದಿನ ಆಡಳಿತಗಳು 20 ಅಂಶಗಳ ಕಾರ್ಯಕ್ರಮ, ಗರೀಬಿ ಹಠಾವೋ ಮಾತುಗಳನ್ನಷ್ಟೇ ಆಡಿದವು. ಆದರೆ ಅರ್ಹ ಫಲಾನುಭವಿಗಳ ವಿಚಾರದಲ್ಲಿ ನಿಗದಿತ ಗುರಿ ತಲುಪಲು ವಿಫಲವಾದವು. ಕುಡಿಯುವ ನೀರು, ಬಡವರಿಗೆ ಮನೆ ನೀಡುವ ವಿಚಾರ ಸೇರಿ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸಿದ ಸಂತಸ ನಮ್ಮ ಸರಕಾರದ್ದು ಎಂದಿದ್ದಾರೆ.