ಜಮ್ಮು-ಕಾಶ್ಮೀರ, ಆ 13 (DaijiworldNews/HR): ಅರೆಸೈನಿಕ ಪಡೆಯ ಬಂಕರ್ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದರಿಂದ ಸಿಆರ್ಪಿಎಫ್ ಅಧಿಕಾರಿಯೊಬ್ಬರು ಗಾಯಗೊಂಡಿರುವ ಘಟನೆ ಶ್ರೀನಗರದ ಈದ್ಗಾ ಪ್ರದೇಶದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಈ ಘಟನೆಯಲ್ಲಿ ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಪರ್ವೇಜ್ ರಾಣಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಎಸ್ಎಂಎಚ್ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನು ಗ್ರೆನೇಡ್ ದಾಳಿಯ ಬಳಿಕ ತಕ್ಷಣ ಪೊಲೀಸರು ಮತ್ತು ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದವು ಮತ್ತು ದಾಳಿಕೋರರನ್ನು ಬಂಧಿಸಲು ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.