ಬೆಂಗಳೂರು, ಆ 14 (DaijiworldNews/DB): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮ ಆಗಸ್ಟ್ 28ರಂದು ದೊಡ್ಡ ಬಳ್ಳಾಪುರದಲ್ಲಿ ನಡೆಯಲಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಿಎಂ ಬೊಮ್ಮಾಯಿ, ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜುಲೈ 28ರಂದು ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವು ಬಿಜೆಪಿ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿತ್ತು. ಇದೀಗ ಮರು ದಿನಾಂಕ ನಿಗದಿ ಮಾಡಲಾಗಿದ್ದು, ಆಗಸ್ಟ್ 28ರಂದು ನಡೆಯಲಿದೆ ಎಂದರು.
ಈ ನಡುವೆ ಶನಿವಾರ ಸಿಎಂ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಜನೋತ್ಸವಕ್ಕೆ ಬಿಎಸ್ವೈ ಅವರನ್ನು ಆಹ್ವಾನಿಸಲು ಈ ಭೇಟಿ ನಡೆದಿದೆ ಎಂದು ಹೇಳಲಾಗಿದೆ.
ಮುಂದಿನ ಏಳು ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನತೋತ್ಸವ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೇಂದ್ರ ನಾಯಕರು ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.