ಶಿವಮೊಗ್ಗ, ಆ 14 (DaijioworldNews/HR): ಶಾಸಕ ಪ್ರಿಯಾಂಕ್ ಖರ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿರುವ ಬಿಎಸ್ವೈ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದು, ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಸಾವರ್ಕರ್ ಅಪಮಾನ ಮಾಡಿದ್ದು ಅಕ್ಷಮ್ಯ ಅಪರಾಧ ಅಪಮಾನ ಮಾಡಿದವರನ್ನು ಈಗಾಗಲೇ ಬಂಧಿಸಲಾಗಿದೆ. ಈ ರೀತಿ ಹೇಳಿಕೆ ನೀಡುವವರಿಗೆ ಶಿಕ್ಷೆ ಆಗಬೇಕು ಆಗ ಮಾತ್ರ ಇಂತಹ ಘಟನೆಗಳು ಮರುಕಳಿಸೋದಿಲ್ಲ ಎಂದು ಹೇಳಿದ್ದಾರೆ.