ಶ್ರೀನಗರ, ಆ 14 (DaijioworldNews/HR): ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ದಕ್ಷಿಣ ಕಾಶ್ಮೀರ ಜಿಲ್ಲೆಯ ಖೈಮೋಹ್ ಪ್ರದೇಶದಲ್ಲಿ ಶನಿವಾರ ರಾತ್ರಿ ಗ್ರೆನೇಡ್ ದಾಳಿ ನಡೆದಿದ್ದು, ಈ ಭಯೋತ್ಪಾದಕ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿಯಾದ ತಾಹಿರ್ ಖಾನ್ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಇನ್ನು ದಾಳಿಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಕೂಡಲೇ ಅನಂತನಾಗ್ನ ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಅದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.