ಬೀಡ್, ಆ 14 (DaijioworldNews/HR): ಆಟೋ ರಿಕ್ಷಾಗೆ ಕಾರು ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಕೇಜ್ ತಹಸಿಲ್ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಮತ್ತು ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದಿದೆ.
ಇನ್ನು ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿದ್ದಾರೆ.