ಶಿವಮೊಗ್ಗ, ಆ 14 (DaijioworldNews/HR): ಸಾವರ್ಕರ್ ಅವರನ್ನು ವಿರೋಧಿಸುವವರು ಅಂಡಮಾನ್ ಜೈಲಿಗೆ ತೆರಳಿ ವಾಸ್ತವ ಸಂಗತಿ ಅರಿತುಕೊಳ್ಳಲಿ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಾವರ್ಕರ್ ಅವರನ್ನು ವಿರೋಧಿಸುವವರು ಅಂಡಮಾನ್ ಜೈಲಿಗೆ ತೆರಳಿ ವಾಸ್ತವ ಸಂಗತಿ ಅರಿತುಕೊಳ್ಳಲಿ. ಬ್ರಿಟಿಷರಿಂದ ಏಳು ಬಾರಿ ಕರಿನೀರಿನ ಶಿಕ್ಷೆಗೆ ಒಳಗಾದ ಸಾವರ್ಕರ್ ತಮ್ಮ ಇಡೀ ಕುಟುಂಬವನ್ನು ಸ್ವಾತಂತ್ರ್ಯ ಹೋರಾಟಕ್ಕೆ ಸಮರ್ಪಿಸಿದ್ದರು ಎಂದರು.
ಇನ್ನು ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾವರ್ಕರ್ ಅವರ ಭಾವಚಿತ್ರವನ್ನು ಶಿವಮೊಗ್ಗದಲ್ಲಿ ತೆರವುಗೊಳಿಸಲು ಒತ್ತಾಯಿಸಿದ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಂಡು ರಾಷ್ಟ್ರ ದ್ರೋಹ ಪ್ರಕರಣ ದಾಖಲಿಸಲು ಶೋಭಾ ಒತ್ತಾಯಿಸಿದ್ದಾರೆ.