ಬೆಳಗಾವಿ, ಆ 15 (DaijiworldNews/MS): 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ನಡೆಯುತ್ತಿದ್ದ ಧ್ವಜಾರೋಹಣ ಸಂದರ್ಭದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ರನ್ನು ಬೆಳಗಾವಿ ರಾಮದೇವ ಹೋಟೆಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಮುಂದಾಗಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎದುರು ಪ್ರತಿಭಟನೆ ಮಾಡಬೇಕು ಎಂದುಕೊಂಡಿದ್ದರು.
ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಕುಮಾರ ಟಾಕಳೆ ಬಂಧನಕ್ಕೆ ಆಗ್ರಹಿಸಿ ಸಚಿವ ಗೋವಿಂದ ಕಾರಜೋಳ ಎದುರೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು.
ಮುನ್ನೆಚ್ಚರಿಕೆ ಕ್ರಮವಾಗಿ ಎಪಿಎಂಸಿ ಠಾಣೆ ಪೊಲೀಸರಿಂದ ನವ್ಯಶ್ರೀ ವಶಕ್ಕೆ ಪಡೆದಿದ್ದಾರೆ.