ನವದೆಹಲಿ, ಆ 15 (DaijiworldNews/HR): ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಅಫ್ಜಲ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಮುಂಬೈನ ಗಿರ್ಗಾಂವ್ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್ಲೈನ್ ಸಂಖ್ಯೆಗೆ 8 ಬಾರಿ ಆತ ಬೆದರಿಕೆ ಕರೆ ಮಾಡಿದ್ದು, ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇನ್ನು ಇದೀಗ ಅಫ್ಜಲ್ ನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.