ಮೈಸೂರು, ಆ 15 (DaijiworldNews/HR): ಕೊಟ್ಟ ಮಾತಿಗೆ ತಪ್ಪಿದ್ದೇನೆ. ದಯವಿಟ್ಟು ಕ್ಷಮಿಸಿ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಅವರು ಜನತೆಯ ಕ್ಷಮೆಯಾಚಿಸಿದ್ದಾರೆ.
ಆಗಸ್ಟ್ 15ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒನ್ ವೇ ಸಂಚಾರಕ್ಕೆ ಚಾಲನೆ ನೀಡಬೇಕಿತ್ತು. ಆದರೆ ದಶಪಥ ಕಾಮಗಾರಿಯಿಂದಾಗಿ ಬೆಂಗಳೂರು - ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ವಿಳಂಬವಾಗಿದ್ದರಿಂದ ಪ್ರತಾಪ್ ಸಿಂಹ ಅವರು ಜನತೆಯ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವ ಅವರು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ, ನಂತರ ಆಗಸ್ಟ್ 15 ರಂದು ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಓಪನ್ ಮಾಡುತ್ತೇವೆ ಎಂದೆ. ಮಾತಿಗೆ ತಪ್ಪಿದ್ದೇನೆ, ದಯವಿಟ್ಟು ಕ್ಷಮಿಸಿ. ಎಲ್ಲ ಪ್ರಯತ್ನಗಳ ನಡುವೆಯೂ ಇನ್ನೂ ವಾರ, ಹತ್ತು ದಿನಗಳ ಕೆಲಸ ಬಾಕಿಯಿದೆ. ಗುಡ್ಡ ಕಡಿದು ರಸ್ತೆ ನಿರ್ಮಾಣ ನಡೆಯುತ್ತಿದೆ, ಸ್ವಲ್ಪ ಕಾಲಾವಕಾಶ ನೀಡಿ ಎಂದು ಕೇಳಿಕೊಂಡಿದ್ದಾರೆ.