ಬೆಂಗಳೂರು, ಆ 15 (DaijiworldNews/HR): ರಾಜ್ಯದಲ್ಲಿ ಕಾಂಗ್ರೆಸ್ ನವರು ಈಗಾಗಲೇ ಅಧಿಕಾರಕ್ಕೆ ಬಂದೆವೆಂಬ ಭ್ರಮೆಯಲ್ಲಿದ್ದಾರೆ. ಆದರೆ ನಾವು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟ ಮಹಾತ್ಮ ಗಾಂಧಿಯವರನ್ನು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನ ಇಂದು ಸ್ಮರಿಸಿಕೊಳ್ಳುವ ದಿನ. ಅಂಬೇಡ್ಕರ್ ಅವರಿಗೆ ಈ ಕಾಂಗ್ರೆಸ್ ಎಷ್ಟು ಕಿರುಕುಳ ಕೊಟ್ಟಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ತಿಳಿಸುತ್ತೇನೆ ಎಂದರು.
ಇನ್ನು ನರೇಂದ್ರ ಮೋದಿ ಅವರು ಹಗಲು, ಇರುಳೆನ್ನದೆ ಕೆಲಸ ಮಾಡುತ್ತಿದ್ದಾರೆ. ಅಂತಹ ಕೆಲಸವನ್ನು ರಾಜ್ಯದಲ್ಲಿ ಮಾಡಿದರೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ವಿಶ್ವದ ಅನೇಕ ದೇಶಗಳು ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿದಿದ್ರೆ. ಭಾರತ ಮಾತ್ರ 6.5ರಷ್ಟು ಆರ್ಥಿಕ ಪರಿಸ್ಥಿತಿ ಚೇತರಿಕೆ ಕಂಡಿದೆ ಎಂದು ಹೇಳಿದ್ದಾರೆ.