ಬೆಂಗಳೂರು, ಆ 15 (DaijiworldNews/HR): ಶಿವಮೊಗ್ಗದಲ್ಲಿ ಯುವಕನ ಮೇಲೆ ಚಾಕು ಇರಿತವಾಗಿದ್ದು, ಈ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈಗಾಗಲೇ ನಮ್ಮ ಅಧಿಕಾರಿಗಳು ಶಿವಮೊಗ್ಗದಲ್ಲಿ ಕ್ರಮ ತೆಗೆದುಕೊಂಡಿದ್ದು, ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದರು.
ಇನ್ನು ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.