ಶಿವಮೊಗ್ಗ, ಆ 16 (DaijiworldNews/MS): ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ಶಿವಮೊಗ್ಗದಲ್ಲಿ ನಡೆದ ಗಲಾಟೆಯಲ್ಲಿ ಮನೆ ಮುಂದೆ ನಿಂತಿದ್ದ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
ಕಸ್ತೂರಾಬಾ ರಸ್ತೆಯಲ್ಲಿ ನಂದಿ ಸಿಲ್ಕ್ ನ ಕಾರ್ಮಿಕ ಪ್ರೇಮ್ ಸಿಂಗ್ (೨೦) ಎಂಬಾತ ಅಂಗಡಿಗೆ ಬಾಗಿಲು ಹಾಕಿಕೊಂಡು ಗಾಂಧಿ ಬಜರ್ ಮಾರುಕಟ್ಟೆ ಬಳಿ ಮನೆಗೆ ಹೋಗುತ್ತಿದ್ದ ವೇಳೆ , ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದರು. ಕೂಡಲೇ ಎಚ್ಚೆತ್ತ ಪೊಲೀಸರು, ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ಎಂಬವನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿತ್ತು. ನಂತರ ಪ್ರಕರಣದ ಪ್ರಮುಖ ಆರೋಪಿಗಾಗಿ ಶೋಧ ಮುಂದುವರಿಸಿದ್ದರು. ಅದರಂತೆ ತೀರ್ಥಹಳ್ಳಿ ರಸ್ತೆಯ ನಮೋ ಶಂಕರ ಲೇಔಟ್ನಲ್ಲಿ ಪ್ರಮುಖ ಆರೋಪಿ ಇರುವ ಸುಳಿವು ಪಡೆದ ಪೊಲೀಸರು ಮಾರ್ನಾಮಿಬೈಲ್ ನ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಶಿವಮೊಗ್ಗ ವಿನೋಬನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಮಂಜುನಾಥ್ ಕುರಿ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ಇಂದು ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.