ಮೈನ್ಪುರಿ, ಆ 16 (DaijiworldNews/MS): ಮನೆಯೊಂದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಸಬ್ಇನ್ಸ್ಪೆಕ್ಟರ್, ಅವರ ಪತ್ನಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ನಡೆದಿದೆ.
ಕುರವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಟ್ರಕ್ ಚಾಲಕನ ಅತೀ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ಮನೆಗೆ ನುಗ್ಗಿದೆ ಎನ್ನಲಾಗಿದೆ. ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
ಈ ಕುರಿತು ಮಾಹಿತಿ ನೀಡಿರುವ ಮೈನ್ಪುರಿ ಎಸ್ಪಿ ಕಮಲೇಶ್ ದೀಕ್ಷಿತ್, ಟ್ರಕ್ ಚಾಲಕ ನಿಯಂತ್ರಣ ತಪ್ಪಿ ಮನೆಯೊಳಕ್ಕೆ ಟ್ರಕ್ ನುಗ್ಗಿಸಿದ್ದಾನೆ. ಇದರಿಂದ ದುರ್ಘಟನೆ ಸಂಭವಿಸಿದೆ ಎಂದಿದ್ದಾರೆ. ಮನೆಯೊಳಗಿದ್ದ ನಿವೃತ್ತ ಸಬ್ಇನ್ಸ್ಪೆಕ್ಟರ್ ಮತ್ತು ಅವರ ಪತ್ನಿ, ಟ್ರಕ್ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.