ಶೋಪಿಯಾನ್, ಆ 16 (DaijiworldNews/MS): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಘಟನೆಯಲ್ಲಿ ಮೃತ ವ್ಯಕ್ತಿಯ ಸಹೋದರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸೇನೆ ಈ ಪ್ರದೇಶವನ್ನು ಸುತ್ತುವರಿದಿದ್ದು ಶೋಧ ಕಾರ್ಯ ನಡೆಸುತ್ತಿದೆ
ಮೂರು ತಿಂಗಳ ಹಿಂದೆ ಉಗ್ರರು ಬುಡ್ಗಾಮ್ ನ ಸರ್ಕಾರಿ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ನೌಕರರೊಬ್ಬರನ್ನು ಹತ್ಯೆಗೈದಿದ್ದು, ಈ ಪ್ರಕರಣದ ನಂತರ ಕಾಶ್ಮೀರಿ ಪಂಡಿತ್ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತ್ತು