ಶ್ರೀನಗರ, ಆ 17 (DaijioworldNews/HR): ಗ್ರೆನೇಡ್ ಎಸೆದು ಉಗ್ರರು ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕುತ್ಪೋರ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಶೋಪಿಯಾನ್ ಜಿಲ್ಲೆಯ ಕುತ್ಪೋರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದ ಸಂದರ್ಭದಲ್ಲಿ ಗ್ರೆನೇಡ್ ದಾಳಿ ನಡೆಸಿದ ಉಗ್ರರು ಪರಾರಿಯಾಗಿದ್ದಾರೆ.
ಇನ್ನು ಉಗ್ರರ ಅಡಗುತಾಣವನ್ನು ನಾಶಗೊಳಿಸಿರುವ ಭದ್ರತಾ ಪಡೆ, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.