ನವದೆಹಲಿ, ಆ 17 (DaijiworldNews/DB): ಯಡಿಯೂರಪ್ಪ ಅವರು ನಮ್ಮ ಹಿರಿಯರು. ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಿದರೂ ನಾವೆಲ್ಲರೂ ಸಂತೋಷ ಪಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಜಾನೇಂದ್ರ ಹೇಳಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸ್ಥಾನಮಾನ ನೀಡಿದ ವಿಚಾರವಾಗಿ ದೆಹಲಿಯಲ್ಲಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವುದು ಸ್ವಾಗತಾರ್ಹ ಎಂದರು.
ನಮ್ಮ ಹಿರಿಯರಾಗಿ, ಮಾರ್ಗದರ್ಶಕರಾಗಿ ಯಡಿಯೂರಪ್ಪ ಅವರು ನಮ್ಮ ಜೊತೆಗಿರುತ್ತಾರೆ. ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಿದರೂ ನಾವೆಲ್ಲರೂ ಖುಷಿ ಪಡುತ್ತೇವೆ. ಪ್ರಸ್ತುತ ಪಕ್ಷ ಅವರಿಗೆ ನೀಡಿರುವ ಜವಾಬ್ದಾರಿಯ ಕುರಿತು ವೈಯಕ್ತಿಕವಾಗಿ ನನಗೆ ಖುಷಿಯಾಗುತ್ತಿದೆ ಎಂದು ತಿಳಿಸಿದರು.