ಬೆಂಗಳೂರು, ಆ 16 (DaijiworldNews/MS): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಪಕ್ಷದ ಕೇಂದ್ರ ಚುನಾಣಾ ಸಮಿತಿ ಮತ್ತು ಸಂಸದೀಯ ಸಮಿತಿಯ ಸದಸ್ಯರನ್ನಾಗಿ ಹೈಕಮಾಂಡ್ ನೇಮಿಸಿದೆ.
ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಸಂಜೆ 4.30ಕ್ಕೆ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಟಿ ಕರೆದಿದ್ದಾರೆ.ಈ ವೇಳೆ ತಮ್ಮ ಮುಂದಿನ ನಿಲುವು ಏನು ಎಂಬ ಬಗ್ಗೆ ಯಡಿಯೂರಪ್ಪ ಸ್ಪಷ್ಟಪಡಿಸುವ ಸಾಧ್ಯತೆ ಇದೆ. ಒಟ್ಟಾರೆ ಈ ಸುದ್ದಿಗೋಷ್ಟಿ ಮಹತ್ವ ಪಡೆದಿದೆ.
ಲಿಂಗಾಯತ ಪ್ರಭಾವಿ ನಾಯಕ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿಲ್ಲ ಎನ್ನುವ ಸಂದೇಶವನ್ನು ಹೈಕಮಾಂಡ್ ರವಾನಿಸುತ್ತಿದ್ದಂತೆಯೇ , ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ಮತ್ತೆ ಪವರ್ ಸೆಂಟರ್ ಆಗುವ ಲಕ್ಷಣ ಗೋಚರಿಸುತ್ತಿದೆ