ಕೋಲ್ಕತಾ, ಆ 18 (DaijiworldNews/MS): ಅಲ್ ಖೈದಾ ಸಂಘಟನೆಯ ಇಬ್ಬರು ಶಂಕಿತ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಖಚಿತ ಸುಳಿವಿನ ಮೇರೆಗೆ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆಯ ಅಧಿಕಾರಿಗಳು ಉತ್ತರ 24 ಪರಗಣ ಜಿಲ್ಲಾಯಲ್ಲಿ ಶಾಸನ್ ಪೊಲೀಸ್ ಠಾಣಾ ವ್ಯಾಪ್ತಿಯ ಖರಿಬರಿ ಪ್ರದೇಶದಲ್ಲಿ ಆಗಸ್ಟ್ 17 ರಂದು ರಾತ್ರಿ ದಾಳಿ ನಡೆಸಿ ಭಯೋತ್ಪಾದಕ ಸಂಘಟನೆಯೊಂದಿಗೆ ತೊಡಗಿಸಿಕೊಂಡಿದ್ದ ಇಬ್ಬರನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರಲ್ಲಿ ಓರ್ವ ಆರೋಪಿ ದಕ್ಷಿಣ ದಿನಾಜ್ಪುರ ಜಿಲ್ಲೆಯ ಗಂಗಾರಾಮ್ಪುರ ನಿವಾಸಿ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರು ಹೂಗ್ಲಿಯ ಅರಾಂಬಾಗಿನಿಂದ ಬಂದವನಾಗಿದ್ದಾನೆ.ದಾಳಿಯ ಸಮಯದಲ್ಲಿ ಅವರ ಬಳಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಭಾರತದ ವಿರುದ್ಧ ಯುದ್ಧ ಸಾರುವ ಅತ್ಯಂತ ಮೂಲಭೂತವಾದ ಚಿಂತನೆಗಳನ್ನು ಒಳಗೊಂಡಿರುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ
ಇಬ್ಬರನ್ನು ವಿಚಾರಣೆಗೊಳಪಡಿಸಿದ ನಂತರ, ಕನಿಷ್ಠ 17 ಸದಸ್ಯರು ಈ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿದುಬಂದಿದ್ದು ಕಾರ್ಯಾಚರಣೆ ಆರಂಭಿಸಲಾಗಿದೆ.
ಬಂಧಿತ ಇಬ್ಬರನ್ನು ಇಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ