ಕೊಡಗು, ಆ 18 (DaijiworldNews/MS): ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಸುದ್ದಿಗೋಷ್ಟಿಯಲ್ಲಿ ರಾಜ್ಯ ಸರ್ಕಾರ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಮೊಟ್ಟೆ ಎಸೆತ ಹೇಡಿಗಳ ಕೃತ್ಯವಾಗಿದ್ದು, ರಾಜ್ಯ ಸರ್ಕಾರ ಹತಾಷವಾಗಿದ್ದು , ಹಣ ಕೊಟ್ಟು ಬಿಜೆಪಿ ಕಾರ್ಯಕರ್ತರಿಂದ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೊಂದೆಡೆ, ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ತಿಮ್ಮಯ್ಯ ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆಗೆ ಕುಳಿತರು. ಸುಮಾರು ಅರ್ಧ ಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೇ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಗೊಂಡಿತ್ತು. ಈ ವೇಳೆ ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಉಭಯ ಪಕ್ಷದ ಕಾರ್ಯಕರ್ತರ ಮನವೊಲಿಸಿ ವಾಪಸ್ ಕಳುಹಿಸಿದರು.