ಶ್ರೀನಗರ, ಆ 19(DaijiworldNews/HR): ಪಾಕಿಸ್ತಾನದ ಡ್ರೋನ್ಗಳ ಮೂಲಕ ಭಾರತಕ್ಕೆ ಶಸ್ತ್ರಾಸ್ತ್ರ ಪೂರೈಸುತ್ತಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಜಮ್ಮು ಮತ್ತು ಕಾಶ್ಮೀರದ 8 ಕಡೆ ಶೋಧ ನಡೆಸಿದೆ ಎಂದು ವರದಿಯಾಗಿದೆ.
ಜಮ್ಮು, ಶ್ರೀನಗರ, ಕಥುವಾ, ಸಾಂಬಾ ಮತ್ತು ದೋಡಾ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಟಿಆರ್ಎಫ್ ಸದಸ್ಯರು ಪಾಕಿಸ್ತಾನದಲ್ಲಿರುವವರ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಶೋಧ ಕಾರ್ಯಾಚರಣೆಯಲ್ಲಿ ವಿವಿಧ ವಸ್ತುಗಳು, ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್ಐಎ ಹೇಳಿದೆ.
ಡ್ರೋನ್ಗಳ ಮೂಲಕ ಪಡೆಯಲಾದ ಶಸ್ತ್ರಾಸ್ತ್ರಗಳನ್ನು ಕಾಶ್ಮೀರದ ಅಲ್ಪಸಂಖ್ಯಾತರು, ವಲಸಿಗರು ಮತ್ತು ಭದ್ರತಾ ಪಡೆಗಳ ಮೇಲಿನ ಭಯೋತ್ಪಾದಕ ದಾಳಿಗಾಗಿ ಟಿಆರ್ಎಫ್ ಭಯೋತ್ಪಾದಕರಿಗೆ ರವಾನೆ ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.