ಕಲಬುರಗಿ, ಆ 19 (DaijiworldNews/DB): ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರು ಮೇಲೆ ಮೊಟ್ಟೆ ಎಸೆದಿರುವ ಘಟನೆ ಬಿಜೆಪಿ ಪ್ರಾಯೋಜಕತ್ವದಿಂದ ಆಗಿರುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.
=
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ನಡುಕ ಹುಟ್ಟಿದೆ. ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. ಅದಕ್ಕಾಗಿ ಇಂತಹವುಗಳನ್ನೆಲ್ಲ ಮಾಡುತ್ತಿದ್ದಾರೆ. ಮೊಟ್ಟೆ ಹೊಡೆಯುವುದು ನಮಗೂ ಬರುತ್ತದೆ. ಆದರೆ ಇಂತಹ ಚಿಲ್ಲರೆ ಕೆಲಸಗಳನ್ನು ಯಾರೂ ಮಾಡಬಾರದು ಎಂದರು.
ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಂತ ಬಲದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಆ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿ ಶಾಸಕರ ಅಭಿಪ್ರಾಯ ಪಡೆದುಕೊಂಡು ಬಳಿಕ ಮುಖ್ಯಮಂತ್ರಿ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಪ್ರತ್ಯೇಕ ಲಿಂಗಾಯಿತ ಧರ್ಮ ನಮ್ಮ ಅಸ್ಮಿತೆಯಾಗಿದೆ. ಚುನಾವಣೆ ಮುಗಿದ ಬಳಿಕ ಎರಡೂ ಕಡೆಯ ಸ್ವಾಮೀಜಿಗಳು ಮತ್ತು ಹಿರಿಯರುಗಳ ನಿರ್ಧಾರದ ಬಗ್ಗೆ ಚರ್ಚಿಸಿ ಆ ಬಳಿಕ ಮುಂದಿನ ಕ್ರಮ ವಹಿಸಲಾಗುವುದು. ಚುನಾವಣೆ ಸಂದರ್ಭ ಆ ವಿಚಾರ ಮಾತನಾಡಿದರೆ ಅನಗತ್ಯ ಗೊಂದಲಗಳಾಗುತ್ತದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.