ಬೆಂಗಳೂರು, ಆ 19(DaijiworldNews/HR): ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ ಎದುರಿಸುವುದು, ಸಮರ್ಥಿಸುವುದು ಹೇಡಿಗಳ ಲಕ್ಷಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು, ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ ಎದುರಿಸುವುದು, ಸಮರ್ಥಿಸುವುದು ಹೇಡಿಗಳ ಲಕ್ಷಣ' ಎಂದಿದ್ದಾರೆ.
ಇನ್ನು ಗುರುವಾರ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿಗೆ ಕೆಲವರು ಮೊಟ್ಟೆ ಎಸೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಒಂಭತ್ತು ಮಂದಿಯನ್ನು ಬಂಧಿಸಲಾಗಿದೆ.