ಚಿಕ್ಕಮಗಳೂರು, ಆ 19(DaijiworldNews/HR): ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಜಿಲ್ಲಾ ಪ್ರವಾಸದಲ್ಲಿದ್ದು, ಅವರ ವಿರುದ್ಧ ಶುಕ್ರವಾರ ಕೂಡ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಾವರ್ಕರ್ ಬಗ್ಗೆ ಹೇಳಿಕೆಗೆ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ಇನ್ನು ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ನೆ ನಡೆಸುತ್ತಿದೆ.