ಬೆಂಗಳೂರು, ಆ 19 (DaijiworldNews/DB): ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ನವರೇ ಹೊರತು ಬಿಜೆಪಿ ಕಾರ್ಯಕರ್ತರಲ್ಲ ಎಂದು ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕುತಂತ್ರಿಗಳೇ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಪ್ರತಿಭಟನೆಯ ಸಂದರ್ಭ ಈ ರೀತಿ ಮಾಡಿ ಬಿಜೆಪಿಯವರ ಮೇಲೆ ವೃಥಾ ಆರೋಪ ಹೊರಿಸಿದ್ದಾರೆ ಎಂದರು.
ಸಿದ್ದರಾಮಯ್ಯ ಅವರನ್ನು ವಿರೋಧಿಸುವವರು ಕಾಂಗ್ರೆಸ್ನಕ್ಕೇ ಹಲವರಿದ್ದಾರೆ. ಹೀಗಾಗಿ ಅವರ ಪಕ್ಷದವರು ಈ ರೀತಿ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಇಂತಹ ಕೃತ್ಯ ಎಸಗಲು ಸಾಧ್ಯವಿಲ್ಲ ಎಂದವರು ತಿಳಿಸಿದರು.