ಬೆಂಗಳೂರು, ಆ 19(DaijiworldNews/HR): ರಾಜ್ಯದ ನೆಲ, ಜಲ, ಜನ, ಸಂಸ್ಕೃತಿ ಹಾಗೂ ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಯಚೂರು ಜಿಲ್ಲೆ ತೆಲಂಗಾಣ ರಾಜ್ಯಕ್ಕೆ ಸೇರಬೇಕೆಂಬ, ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಅವರ ಹೇಳಿಕೆಗೆ ಯಾವುದೇ ಪ್ರಾಮುಖ್ಯತೆ ನೀಡುವ, ಅವಶ್ಯಕತೆ ಇಲ್ಲ ಎಂದಿದ್ದಾರೆ.
ಇನ್ನು ಸಿದ್ದರಾಮಯ್ಯನವರ ವಿರುದ್ಧ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರಿಗೆ ಹೆಚ್ಚಿನ ಹಾಗೂ ಸಮರ್ಪಕ ಭದ್ರತೆ ಒದಗಿಸಲು ಸರಕಾರ ಬದ್ಧವಾಗಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ಬಗ್ಗೆ ಪೊಲೀಸರು ಕ್ರಮ ವಹಿಸುತ್ತಾರೆ ಎಂದರು.
ವಿರೋಧ ಪಕ್ಷದ ನಾಯಕರು, ಕೊಡಗು ಜಿಲ್ಲಾ ಪ್ರವಾಸದಲ್ಲಿದ್ದಾಗ ನಡೆದ ಅಹಿತಕರ ಘಟನೆ ದುರದೃಷ್ಟಕರವಾಗಿದ್ದು, ಪೊಲೀಸರು ಕೆಲವರನ್ನು ಬಂಧಿಸಿದ್ದು, ಕಾನೂನು ಕ್ರಮ ಜಾರಿಯಲ್ಲಿದೆ ಎಂದು ಹೇಳಿದ್ದಾರೆ.