ಮಡಿಕೇರಿ, ಆ 20 (DaijiworldNews/MS): ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಮೇಲೆ ಎಫ್ಐಆರ್ ದಾಖಲಾಗಿದೆ.
ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ, ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ಮೇಲೆ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮಡಿಕೇರಿಗೆ ಗುರುವಾರ ಮಳೆಹಾನಿ ವೀಕ್ಷಣೆಗೆ ತೆರಳಿದ್ದ ವೇಳೆ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಲ್ಲದೆ, ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ದೂರು ನೀಡಿದ್ದರು.
ಈ ದೂರಿನ ಹಿನ್ನಲೆಯಲ್ಲಿ9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಮಡಿಕೇರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳು ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಘಟನೆಯ ಹಿನ್ನಲೆಯಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.