ಬೆಂಗಳೂರು, ಆ 20 (DaijiworldNews/DB): ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯಾಗುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.22ರಿಂದ ಆ.24ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರದಲ್ಲಿ ಆ.23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಮತ್ತು ಚಾಮರಾಜನಗರದಲ್ಲಿ ಆ.24ರಂದು ಯೆಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚೇನು ಮಳೆ ಇರುವುದಿಲ್ಲ. ಆದಾಗ್ಯೂ ಸಾಧಾರಣ ಮಟ್ಟದಲ್ಲಿ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.