ಬೆಂಗಳೂರು, ಆ 20 (DaijiworldNews/HR): ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಎಂದು ಬಿಜೆಪಿ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ ಬಿಜೆಪಿ ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದರು.
ಇನ್ನು ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು?
ಕಾಂಗ್ರೆಸ್ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? ಎಂದು ಪ್ರಶ್ನಿಸಿದ್ದಾರೆ.