ನವದೆಹಲಿ, ಆ 20 (DaijiworldNews/HR): ಚಂಡೀಗಢ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನ ಇಡಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಶನಿವಾರ ನಿರ್ಧರಿಸಿವೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಹರಿಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ನಡುವಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.