ಬೆಂಗಳೂರು, ಆ 21 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ.
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ಮಡಿಕೇರಿಯ ಎಸ್ ಪಿ ಕಚೇರಿ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಇನ್ನು ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರು, ಸಂಸದರು, ರಾಜ್ಯಸಭೆ, ಪರಿಷತ್ ನ ಸದಸ್ಯರು ಭಾಗಿಯಾಗಲು ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಇ ತುಕಾರಾಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.