ನವದೆಹಲಿ, ಆ 21 (DaijiworldNews/HR): ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ.
2021-22ನೇ ಸಾಲಿನ ದೆಹಲಿಯ ಜಿಎನ್ಸಿಟಿಡಿಯ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಅಕ್ರಮಗಳು ನಡೆದಿವೆ ಎಂಬ ದೂರಿನ ಆಧಾರದಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿದೆ.
ಇನ್ನು ಮನೀಶ್ ಸಿಸೋಡಿಯಾ ಅಂದಿನ ಅಬಕಾರಿ ಆಯುಕ್ತ ಅರ್ವಾ ಗೋಪಿ ಕೃಷ್ಣ, ಅಬಕಾರಿ ಇಲಾಖೆಯ ಅಂದಿನ ಉಪ ಆಯುಕ್ತ ಆನಂದ್ ತಿವಾರಿ ಮತ್ತು ಅಬಕಾರಿ ಇಲಾಖೆ ಸಹಾಯಕ ಆಯುಕ್ತ ಪಂಕಜ್ ಭಟ್ನಾಗರ್ ಅಬಕಾರಿ ನೀತಿಗೆ ಸಂಬಂಧಿಸಿದ ಶಿಫಾರಸು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.