ಭಟ್ಕಳ, ಆ 21 (DaijiworldNews/DB): ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಬಾಲಕನನ್ಬು ಕಾರಿನಲ್ಲಿ ಬಂದ ಅಪರಿಚಿತರು ಅಪಹರಿಸಿದ ಘಟನೆ ಭಟ್ಕಳ ತಾಲೂಕಿನ ಆಜಾದ್ ನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಕೊಕ್ತಿ ಆಜಾದ ನಗರ ನಿವಾಸಿ ಅಲಿ ಸಾದಾ ಇಸ್ಲಾಂ ಸಾದಾ (8) ಅಪಹರಣಕ್ಕೊಳಗಾದ ಬಾಲಕ. ಬಾಲಕನ ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜೆ ಐದು ಗಂಟೆಯಿಂದ ಇದೇ ಪ್ರದೇಶದಲ್ಲಿ ವಾಹನ ಸುತ್ತುತ್ತಿರುವುದು ಕಂಡು ಬಂದಿದ್ದು ಅಪಹರಣದ ವೇಳೆ ವ್ಯಾನ್ ಹಿಂದೆ ದ್ವಿಚಕ್ರ ವಾಹನವೂ ಕಾಣಿಸಿಕೊಂಡಿದೆ. ಪೊಲೀಸರು ಇತರ ಮನೆಗಳ ಹೊರಗಿನ ಸಿಸಿಟಿವಿ ದೃಶ್ಯಗಳನ್ನು ಸಹ ಪಡೆದುಕೊಂಡಿದ್ದು, ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.
ಬಾಲಕನ ತಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ದಿವಾಕರ ಅವರ ನೇತೃತ್ವದಲ್ಲಿಅಪಹರಣಕಾರರ ಪತ್ತೆ ಕಾರ್ಯ ನಡೆಯುತ್ತಿದೆ. ನಗರದ ವಿವಿಧೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಆಸುಪಾಸಿನ ಮನೆಗಳ ಹೊರಗಿನ ಸಿಸಿಟಿವಿ ದೃಶ್ಯಗಳನ್ನು ಸಹ ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.