ನವದೆಹಲಿ, ಆ 21 (DaijiworldNews/DB): ಕಾಂಗ್ರೆಸ್ ಪಕ್ಷದ ಹಿಮಾಚಲ ಪ್ರದೇಶದ ಪ್ರಚಾರ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ರಾಜೀನಾಮೆ ನೀಡಿದ್ದಾರೆಂದು ಭಾನುವಾರ ತಿಳಿದು ಬಂದಿದೆ.
ರಾಜೀನಾಮೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಶರ್ಮಾ ಪತ್ರ ಬರೆದಿದ್ದಾರೆ. ಸಮಾಲೋಚನಾ ಪ್ರಕ್ರಿಯೆಯಲ್ಲಿ ತಮ್ಮನ್ನು ಅವಗಣನೆ ಮಾಡಲಾಗಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಶರ್ಮಾ ರಾಜೀನಾಮೆ ನೀಡಿರುವುದು ಪಕ್ಷದಲ್ಲಿ ಸಂಚಲನ ಮೂಡಿದಿದೆ. ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ಅವರು ರಾಜೀನಾಮೆ ನೀಡಿದ್ದರು.