ನವದೆಹಲಿ, ಆ 21 (DaijiworldNews/HR): ತನ್ನನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇತ್ತೀಚೆಗೆ ಶೋಪಿಯಾನ್ ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ಭೇಟಿ ಮಾಡುವುದನ್ನು ತಡೆಯಲು ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದಿದ್ದಾರೆ.
ಇನ್ನು ಗುಪ್ಕರ್ ಪ್ರದೇಶದಲ್ಲಿನ ತಮ್ಮ ನಿವಾಸದ ಬೀಗ ಹಾಕಿದ ಗೇಟ್ ಗಳು ಮತ್ತು ಹೊರಗೆ ನಿಂತಿದ್ದ ಸಿಆರ್ಪಿಎಫ್ ವಾಹನದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.