ಬೆಂಗಳೂರು, ಆ 22 (DaijiworldNews/HR): 2001ರಲ್ಲಿ ಬೆಂಗಳೂರಿನ ಸುಬ್ಬರಾಜು ಎಂಬ ಬಿಲ್ಡರ್ರನ್ನು ಕೊಲೆಮಾಡಿದ್ದ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿ ಆರೋಪಿಯಾಗಿದ್ದು, ಇದೀಗ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
2001 ಜನವರಿ 5ರಂದು ಬಿಲ್ಡರ್ ಸುಬ್ಬರಾಜು ಅವರನ್ನು ಶೇಷಾಧ್ರಿಪುರಂನ ಅವರ ಕಚೇರಿಯಲ್ಲೇ ಕೊಲೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಪ್ರತಿಷ್ಠಿತ ಪ್ರದೇಶದಲ್ಲಿ ಸುಬ್ಬರಾಜು ಆಸ್ತಿ ಕೊಳ್ಳಲು ಮುಂದಾಗಿದ್ದು, ಆಗ ಬೆಂಗಳೂರಿನ ಭೂಗತಲೋಕ ಆಳುತ್ತಿದ್ದ ಮುತ್ತಪ್ಪ ರೈ ಅವರಿಂದ ಸುಬ್ಬರಾಜುಗೆ ಬೆದರಿಕೆ ಇತ್ತು ಎನ್ನಲಾಗಿದೆ.
ಇನ್ನು ರವಿ ಪೂಜಾರಿ ಮತ್ತಿತರರನ್ನು ಬಳಸಿ ಮುತ್ತಪ್ಪ ರೈ ಸುಬ್ಬರಾಜುವಿನ ಹತ್ಯೆ ಮಾಡಿಸಿದ್ದ ಎಂಬ ಆರೋಪ ಇದೆ.
ರವಿ ಪೂಜಾರಿ ಇತರ ಏಳು ಮಂದಿ ಜೊತೆ ಸೇರಿ ಸುಬ್ಬರಾಜು ಹತ್ಯೆಗೆ ಸ್ಕೆಚ್ ಹಾಕಿದ್ದು, ಯೂಸುಫ್ ಬಚಕಾನ ಮತ್ತು ನಿತಿನ್ ಸಾವಂತ್ ಎಂಬಿಬ್ಬರು ಶೂಟರ್ಗಳನ್ನು ನೇಮಿಸಲಾಗಿತ್ತು.