ಶ್ರೀನಗರ, ಆ 22 (DaijiworldNews/HR): ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಒಂಬತ್ತು ನಾಗರಿಕರು ಗಾಯಗೊಂಡಿರುವ ಘಟನೆ ದಾಲ್ ಸರೋವರದ ದಡದಲ್ಲಿರುವ ಪ್ರಸಿದ್ಧ ಮೊಘಲ್ ಉದ್ಯಾನದ ಬಳಿ ನಡೆದಿದೆ.
ಏಳು ಮಂದಿಯನ್ನು ಎಸ್ಎಂಎಚ್ಎಸ್ ಆಸ್ಪತ್ರೆಗೆ ಮತ್ತು ಇನ್ನಿಬ್ಬರನ್ನು ಎಸ್ಕೆಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಗಾಯಗೊಂಡವರ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.