ಪುದುಚೇರಿ, ಆ 22 (DaijiworldNews/HR): ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪಾಂಡಿಚೇರಿ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಬಂದಿದ್ದ ವೇಳೆ ಅವರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಹೋಗಿದ್ದರು. ಮಾಜಿ ಸಚಿವರೊಬ್ಬರನ್ನ ಬೆಂಬಲಿಸುವ ಬಣ ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಧರಣಿ ನಡೆಸುತ್ತಿತ್ತು. ಈ ವೇಳೆ ಸಭೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ದಿನೇಶ್ ಗುಂಡೂರಾವ್ ಅವರನ್ನು ಸುತ್ತುವರಿದು ತಳ್ಳಾಡಿ ಗಲಾಟೆ ಮಾಡಿದ್ದಾರೆ.
ಇನ್ನು ದಿನೇಶ್ ಗುಂಡೂರಾವ್ ಅವರು ಕಾರಿಗೆ ಹತ್ತದಂತೆ ತಡೆದು ಕಾರಿಗೆ ಮುತ್ತಿಗೆ ಹಾಕಿದ್ದು,ನಾಯಕತ್ವ ಬದಲಾವಣೆ ಕುರಿತು ಉತ್ತರ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.