ಪಾಟ್ನಾ, ಆ 22 (DaijiworldNews/HR): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನರನ್ನು ಬಂಧಿಸಲಾಗಿದೆ.
ಸಿಎಂ ನಿತೀಶ್ ಕುಮಾರ್ ಅವರ ಮೂರು-ನಾಲ್ಕು ವಾಹನದ ಗಾಜುಗಳು ಪಾಟ್ನಾ-ಗಯಾ ಮಾರ್ಗದ ಗೌರಿಚಕ್ನ ಸೊಹ್ಗಿ ಗ್ರಾಮದಲ್ಲಿ ಜನಸಮೂಹದ ದಾಳಿಗೆ ಪುಡಿಪುಡಿಯಾಗಿವೆ.
ಸೋಮವಾರ ಸಿಎಂ ಭೇಟಿಗೂ ಮುನ್ನ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ ಈ ಘಟನೆ ನಡೆದಿದ್ದು,ನಿತೀಶ್ ಕುಮಾರ್ ಅವರು ಇಂದು ಗಯಾದಲ್ಲಿ ನಿರ್ಮಿಸಲಾಗುತ್ತಿರುವ ರಬ್ಬರ್ ಅಣೆಕಟ್ಟಿನ ಪರಿಶೀಲನೆ ಮತ್ತು ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಇತ್ತೀಚೆಗಷ್ಟೇ ಸೊಹ್ಗಿ ಪ್ರದೇಶದಲ್ಲಿ ಯುವಕನ ಮೃತದೇಹವೊಂದು ಪತ್ತೆಯಾಗಿತ್ತು. ಇದು ಸೊಹ್ಲಿ ವಲಯದ ಗ್ರಾಮಸ್ಥರನ್ನು ಕೆರಳಿಸಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ದಾರಿಯಲ್ಲಿ ತೆರಳುತಿದ್ದ ನಿತೀಶ್ ಕುಮಾರ್ ಬೆಂಗಾವಲು ಪಡೆಯ ಮೇಲೆ ಉದ್ರಿಕ್ತರ ಗುಂಪು ಕಲ್ಲುಗಳಿಂದ ದಾಳಿ ಮಾಡಿದೆ ಎಂದು ಪಾಟ್ನಾ ಡಿಎಂ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ.