ಬೆಂಗಳೂರು, ಆ 22 (DaijiworldNews/HR): ಸರ್ಕಾರ ಮತ್ತು ಬಿಜೆಪಿ ನಡೆಸುತ್ತಿರುವ ಕೃತ್ಯಗಳಿಂದ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಕೊಡುಗು ಪ್ರವಾಸಕ್ಕೆ ಅಡ್ಡಿಪಡಿಸುವ ಮೂಲಕ ಬಿಜೆಪಿ ಪ್ರಚೋದನೆ ನೀಡಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯವರ ಪ್ರವಾಸಕ್ಕೆ ಅಡ್ಡಿಪಡಿಸಲು ಅವಕಾಶಗಳಿವೆ. ನಾವು ಈ ವಿಷಯವಾಗಿ ಯಾವುದೇ ಕರೆ ನೀಡುವುದಿಲ್ಲ, ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ಬಿಜೆಪಿ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಇನ್ನು ಸರ್ಕಾರ ಮತ್ತು ಬಿಜೆಪಿ ನಡೆಸುತ್ತಿರುವ ಕೃತ್ಯಗಳಿಂದ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳಾಗುತ್ತಿದ್ದು, ಬಂಡವಾಳ ಹೂಡಿಕೆಗೆ ಹಿನ್ನಡೆಯಾಗಿದೆ ಶಿವಮೊಗ್ಗದಂತಹ ಜಿಲ್ಲೆಗಳಲ್ಲಿ ಪದೇ ಪದೇ ಗಲಭೆಗಳಿಂದ ಗೊಂದಲಗಳಾಗುತ್ತಿವೆ ಎಂದಿದ್ದಾರೆ.