ಮೈಸೂರು, ಆ 22 (DaijiworldNews/HR): ಕೊಡಗಿಗೆ ಟಿಪ್ಪು ಬಂದಾಗಲೇ ಹೆದರಲಿಲ್ಲ. ಸಿದ್ದು ಸುಲ್ತಾನ್ ಬಂದರೇ ಹೆದರುತ್ತೇವಾ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದದಾರೆ.
ಆಗಸ್ಟ್ 26 ರ ಮಡಿಕೇರಿ ಚಲೋ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮೈಸೂರು, ಮಂಡ್ಯ, ಹಾಸನ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ ಎಂದಿದ್ದಾರೆ.
ಇನ್ನು ನಿಮ್ಮ ಶ್ರೀಮತಿ ಚಾಮುಂಡೇಶ್ವರಿ ಭಕ್ತೆ. ಅವರು ಸಹಾ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಕೇಳಿ. ಅವರು ಆ ರೀತಿ ಹೇಳಿದರೆ ಬಂದು ಸಾರ್ವಜನಿಕವಾಗಿ ಹೇಳಿ. ಆಗ ನಾವು ಒಪ್ಪಿಕೊಳ್ಳುತ್ತೇವೆ ಎಂದರು.