ಬೆಂಗಳೂರು, ಆ 22 (DaijiworldNews/MS): ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರ ನಂಟಿಸಿದ ವಿಚಾರವಾಗಿ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತರ ಕೊಡಬೇಕು. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು. ನಮ್ಮ ಕಾರ್ಯಕರ್ತರು ಮಲಗಿಲ್ಲ ಎಚ್ಚರನೇ ಇದ್ದಾರೆ. ಇದಕ್ಕೆ ಉತ್ತರ ಕೊಡಲು ನಮಗೂ ಬರುತ್ತದೆ. ಆದರೆ ಶಾಂತಿ ಕಾಪಾಡಬೇಕು ಅನ್ನೋದು ನಮ್ಮ ಉದ್ದೇಶವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದರು.