ಮಡಿಕೇರಿ, ಆ 23 (DaijiworldNews/HR): ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ವಿರೋಧಿಸಿ ಆಗಸ್ಟ್ 26 ರಂದು ಕೊಡಗು ಚಲೋಗೆ ಕಾಂಗ್ರೆಸ್ ಕರೆ ನೀಡಿದ್ದು, ಇದೇ ವೇಳೆ ಬಿಜೆಪಿ ಸಮಾವೇಶ ಆಯೋಜಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಆಗಸ್ಟ್ 24 ರಂದು ಬೆಳಗ್ಗೆ 6 ಗಂಟೆಯಿಂದ 27 ರಂದು ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಡಾ. ಸತೀಶ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಕಾಂಗ್ರೆಸ್ ಮತ್ತು ಬಿಜೆಪಿ ಸಮಾವೇಶಗಳಿಗೆ ಲಕ್ಷಾಂತರ ಮಂದಿ ಭಾಗವಹಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಎರಡು ಪಕ್ಷದ ಸಮಾವೇಶಗಳಿಗೆ ಬ್ರೇಕ್ ಹಾಕಲಾಗಿದೆ.