ಹೈದರಾಬಾದ್, ಆ 23 (DaijiworldNews/HR): ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ರಾಜಾ ಸಿಂಗ್ ಅವರ ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ವಿರುದ್ದ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇನ್ನು ರಾಜಾ ಸಿಂಗ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಹೈದರಾಬಾದ್ ಪೊಲೀಸ್ ಕಮಿಷ್ನರ್ ಕಚೇರಿ ಎದುರು ನಿನ್ನೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಬೆನ್ನಲ್ಲೇ ಬಿಜೆಪಿ ಶಾಸಕರ ವಿರುದ್ಧ ಕೇಸ್ ದಾಖಲಾಗಿತ್ತು.