ಬೆಂಗಳೂರು, ಆ 23 (DaijiworldNews/HR): ರಸ್ತೆ ಗುಂಡಿಗೆ ಬೈಕ್ ನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿರುವ ಘಟನೆ ವರದಿಯಾಗಿದೆ.
ಆಗಸ್ಟ್ 18 ರಂದು ಸುಂಕದಕಟ್ಟೆ ಬಳಿ ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸುಪ್ರೀತ್ (44) ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲೇಶ್ವರಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.
ಇನ್ನು ರಸ್ತೆಗುಂಡಿಯಿಂದಾಗಿ ಸುಪ್ರೀತ್ ಪ್ರಾಣ ಹೋಗಿದೆ ಎಂದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುಪ್ರೀತ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.