ಬೆಳಗಾವಿ, ಆ 23 (DaijiworldNews/HR): ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯ ಸಮಯದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇದರಲ್ಲಿ ಪಾತ್ರವಹಿಸಿದವರನ್ನು ಬಂಧಿಸಿದ್ದಾರೆ.
ಗದಗ ಮಾತ್ರವಲ್ಲದೇ ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವೆಡೆ ಅಕ್ರಮದ ಜಾಲ ನಡೆಸಿರುವುದು ಕಂಡುಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನು ಅಕ್ರಮ ಎಸಗಿ 13 ಜನ ಅಭ್ಯರ್ಥಿಗಳು ಉತ್ತರ ಬರೆದಿರುವ ಮಾಹಿತಿ ಲಭ್ಯವಾಗಿದ್ದು, ಇವರ ಪಟ್ಟಿ ಬಹುದೊಡ್ಡದಿದೆ ಎಂದು ಅಂದಾಜು ಮಾಡಲಾಗಿದೆ.
ಆಗಸ್ಟ್ 7ರಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಪರೀಕ್ಷೆ ನಡೆದಿದ್ದು, ಗೋಕಾಕ್ ಜಿ. ಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿರುವುದು ತಿಳಿದಿದೆ.