ರಾಜಸ್ಥಾನ, ಆ 23 (DaijiworldNews/HR): 12 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಘಟನೆ ಭಾನುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ವಿದ್ಯಾರ್ಥಿನಿಯು ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಕೆಯನ್ನು ಶನಿವಾರ ರಾತ್ರಿ ಜಿಲ್ಲೆಯ ಮಹಾತ್ಮಾ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಸ್ಕ್ಯಾನ್ ಮಾಡಿಸಿದಾಗ ಆಕೆ 33 ವಾರಗಳ ಗರ್ಭಿಣಿ ಎಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿಲೀಪ್ ರೊಕ್ಡಿಯಾ, ಬಾಲಕಿಯು 33 ವಾರಗಳ ಗರ್ಭಧಾರಣೆಯನ್ನು ಹೊಂದಿದ್ದಾಳೆ ಎಂದು ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ನಾವು ಅವಳೊಂದಿಗೆ ಮಾತನಾಡಿದ್ದೇವೆ. ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಆಕೆಗೆ ಸಿಡಬ್ಲ್ಯೂಸಿ ಕೌನ್ಸೆಲಿಂಗ್ ಅನ್ನು ಸಹ ಕೇಳಲಾಗುತ್ತದೆ ಎಂದಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಾಲಕಿಯನ್ನು ತಜ್ಞರು ಮತ್ತು ಮಹಿಳಾ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.