ಬೆಂಗಳೂರು, ಆ 23 (DaijiworldNews/HR): ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಪ್ರತಿಭಟನಾ ರ್ಯಾಲಿಯನ್ನು ಮುಂದೂಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
ಇನ್ನು ಜಿಲ್ಲಾಧಿಕಾರಿ ಆದೇಶ ಎಂದರೆ ಅದು ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶವನ್ನು ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.