ಕೋಲಾರ, ಆ 23 (DaijiworldNews/HR): ಮುಂಬರುವ ದಿನಗಳಲ್ಲಿ ಬರುವ, ಗಣೇಶೋತ್ಸವ ಕಾರ್ಯಕ್ರಮವನ್ನು, ಶಾಂತಿಯುತವಾಗಿ ಆಚರಿಸಲು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮೈದಾನದಲ್ಲಿ, ಗಣೇಶೋತ್ಸವ ಆಚರಣೆ ಸಂಬಂಧ ಅವಕಾಶ ಮಾಡಿಕೊಡುವ ಬಗ್ಗೆ, ಸ್ಥಳೀಯ ಆಡಳಿತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಇನ್ನು ಎಸಿಬಿ ರದ್ದುಪಡಿಸಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಕೊಡಗು ಜಿಲ್ಲಾಡಾಳಿತ ನಿಷೇಧಾಜ್ಞೆ ತೀರ್ಮಾನ ತೆಗೆದುಕೊಂಡಿದ್ದು, ಎಲ್ಲರೂ ಈ ವಿಷಯದಲ್ಲಿ ಸಹಕರಿಸಬೇಕು ಎಂದಿದ್ದಾರೆ.