ಜಮ್ಮು, ಆ 23 (DaijiworldNews/HR): ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭಾರತೀಯ ಸೇನೆ ಇಂದು ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದಿದೆ.
ಶಂಕಿತ ಭಯೋತ್ಪಾದಕರ ಗುಂಪು ಗಡಿಯಾಚೆಯಿಂದ ಕತ್ತಲೆಯ ಪ್ರದೇಶದ ಮೂಲಕ ನೌಶೇರಾದ ಲಾಮ್ನ ಪುಖಾರ್ನಿ ಗ್ರಾಮಕ್ಕೆ ನುಸುಳಲು ಪ್ರಯತ್ನಿಸಿದ್ದು, ಅದ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ.
ಇನ್ನು ಪಾಕಿಸ್ತಾನ ಸೇನೆಯ ಗುಪ್ತಚರ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಲಷ್ಕರ್-ಎ-ತೊಯ್ಬಾದ ಮಾರ್ಗದರ್ಶಕನನ್ನು ಭಾನುವಾರ ಗಾಯಗೊಂಡ ಸ್ಥಿತಿಯಲ್ಲಿ ಬಂಧಿಸಿದ ಬೆನ್ನಲ್ಲೇ ನೌಶೇರಾ ಸೆಕ್ಟರ್ನಲ್ಲಿ ಒಳನುಸುಳುವಿಕೆಗೆ ಯತ್ನಿಸಲಾಗಿದೆ ಎನ್ನಲಾಗಿದೆ.